ರಾಜ್ಯ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರಕಟಿಸಲಾಗಿರುವ ನೂತನ ವರ್ಷ 2026 ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಗುರುವಾರದಂದು ಬಿಡುಗಡೆ ಮಾಡಿದರು.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2026 ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.  ಸರ್ಕಾರಿ ನೌಕರರು ನೂತನ ಕ್ಯಾಲೆಂಡರ್ ವರ್ಷದಲ್ಲಿ ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು.  ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

- Advertisement - 

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಕೂಡ ಎಲ್ಲ ಸರ್ಕಾರಿ ನೌಕರರಿಗೆ ನೂತನ ವರ್ಷದ ಶುಭಾಶಯ ಕೋರಿದರು.

     ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ರಮೇಶ್ ಸೇರಿದಂತೆ ಮಲ್ಲಿಕಾರ್ಜುನ್, ಶ್ರೀನಿವಾಸ್, ಬಾಗೇಶ್ ಉಗ್ರಾಣ ಹಾಗೂ ಸಂಘದ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";