ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಲಿಂಗಾಯತ ನೀಲಗಾರ ಸಮಾಜದ ರಾಜ್ಯ ಮಟ್ಟದ 10ನೇ ಸಮಾವೇಶವನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಶ್ರೀಲಕ್ಷ್ಮೀ ಕನ್ವೆನ್ಷನ್ ಹಾಲ್ ನಲ್ಲಿ ಜನವರಿ 04 ಭಾನುವಾರದಂದು ಜರುಗಲಿದೆ.
ಕಾರ್ಯಕ್ರಮದಲ್ಲಿ ಗ್ರಂಥ ಲೋಕಾರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೀಲಗಾರ ಸಮಾಜದ ಬಾಂಧವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಲಿಂಗಾಯತ ನೀಲಗಾರ ಸಮಾಜದ ಅಧ್ಯಕ್ಷ ಅಶೋಕ ವಿಜಯಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

