ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ಸೊಂಡೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ರಿಂದ 7ನೇ ತರಗತಿಯ 125 ಮಕ್ಕಳಿಗೆ ಈಚೆಗೆ ಬೆಂಗಳೂರಿನ ಯೂತ್ ಫಾರ್ ಸೇವಾ ಮತ್ತು ಪೆರಿಸ್ಟೆಂಟ್ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ನೊಂದಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಬಿ.ಕಾಂತಬಾಬು, ಎಸ್ಡಿಎಂಸಿ ಅಧ್ಯಕ್ಷ ಲಿಂಗರಾಜು, ಪೆರಿಸ್ಟೆಂಟ್ ಫೌಂಡೇಶನ್ನ ವೆಂಕಟೇಶ್, ಎಸ್ಡಿಎಂಸಿ ಸದಸ್ಯರು, ಗ್ರಾಮದ ಮುಖಂಡರಾದ ಓ.ಮಂಜುನಾಥ್, ಜೆಸಿಬಿ ಮಂಜುನಾಥ್ ಇದ್ದರು.

