ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಗೂಂಡಾಗಳಿಂದ ಬಿಜೆಪಿ ಶಾಸಕ ಜನಾರ್ದನ್ ರೆಡ್ಡಿ ಅವರ ಮೇಲೆ ಹಲ್ಲೆ ಮತ್ತು ಕೊಲೆ ಪ್ರಯತ್ನ ನಡೆದ ಹಿನ್ನೆಲೆಯಲ್ಲಿ ಭಾನುವಾರ ಬಳ್ಳಾರಿಗೆ ಭೇಟಿ ನೀಡಿ ನಮ್ಮ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಧೈರ್ಯ ತುಂಬಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಯಿತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಕಾಂಗ್ರೆಸ್ ಶಾಸಕ ಭರತ್ ಅವರ ಗನ್ ಮ್ಯಾನ್ ಗುಂಡು ಹಾರಿಸಿದ್ದಾರೆ ಎಂಬ ಸತ್ಯ ಬಯಲು ಮಾಡಿದರು ಎಂಬ ಕಾರಣಕ್ಕೆ ಎಸ್ಪಿಯನ್ನು ಅಮಾನತು ಮಾಡಲಾಗಿದೆ ಎಂದು ಅವರು ಕಿಡಿಕಾರಿದರು.
ಗನ್ ಅನ್ನು ವಶಕ್ಕೆ ಪಡೆದು ಆರೋಪಿಗಳು ರಾಜ್ಯ ಬಿಟ್ಟು ಓಡಿಹೋಗಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಸರ್ಕಾರವೇ ಅಪರಾಧಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಬಳ್ಳಾರಿ ಘಟನೆಯೇ ಸಾಕ್ಷಿ ಎಂದು ಅಶೋಕ್ ಆರೋಪಿಸಿದ್ದಾರೆ.

