ಕನ್ನಡ ಮಾತನಾಡದಂತೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಸ್ಟೆಲ್ ವಾರ್ಡನ್ ವಿರುದ್ಧ ಬೃಹತ್ ಪ್ರತಿಭಟನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸ್ಟೆಲ್ ವಾರ್ಡನ್ ಒಬ್ಬ ಕನ್ನಡ ಮಾತನಾಡದಂತೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದಿದೆ.
ಇದರಿಂದ ರೊಚ್ಚಿಗೆದ್ದಿರುವ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು.

ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿ ಆದೇಶಿಸಿದೆ.

- Advertisement - 

ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಭಾಷಾ ದೌರ್ಜನ್ಯ ಸೇರಿದಂತೆ ಎಲ್ಲ ರೀತಿಯ ಕಿರುಕುಳ ಕೂಡಲೇ ನಿಲ್ಲಬೇಕು. ಉಪನ್ಯಾಸಕರ ಮೇಲಿನ ದಬ್ಬಾಳಿಕೆ ನಿಲ್ಲಬೇಕು ಎಂದು ಕನ್ನಡಪರ ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಕಾಲೇಜ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

- Advertisement - 

Share This Article
error: Content is protected !!
";