ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜಪೇಟೆಯ ಜೆ.ಜೆ. ನಗರದಲ್ಲಿ ಓಂ ಶಕ್ತಿ ಮೆರವಣಿಗೆ ವೇಳೆ ಮಾಲಾಧಾರಿ ಮಹಿಳೆಯರ ಮೇಲೆ ಕಲ್ಲುತೂರಿರುವ ಘಟನೆಗೆ ಜೆಡಿಎಸ್ ತೀವ್ರವಾಗಿ ಖಂಡಿಸಿದೆ.
ಓಲೈಕೆ ರಾಜಕಾರಣ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ.
ಮೆರವಣಿಗೆ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕಲ್ಲು ತೋರಿದ್ದು, ಇಬ್ಬರು ಯುವತಿಯರ ತಲೆಗೆ ಗಾಯವಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಸಿದ್ದರಾಮಯ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

