ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಕೋರ್‌ಕಮಿಟಿ ಸಭೆಯಲ್ಲಿ ಜರುಗಿತು.
ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈಗೊಳ್ಳಬೇಕಾದ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ ಸದಾನಂದಗೌಡ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ,
ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಅಶ್ವಥ್ ನಾರಾಯಣ್, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ ರವಿ, ಮಾಜಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಉಪಸ್ಥಿತರಿದ್ದರು.

