ಜಿ.ಆರ್.ಪ್ರದೀಪ್ ಕುಮಾರ್‍ಗೆ ಪಿಹೆಚ್‍ಡಿ ಪದವಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಆಯ್ಕೆ ಶ್ರೇಣಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಜಿ.ಆರ್.ಪ್ರದೀಪ್ ಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಎನ್.ಲಕ್ಷ್ಮಣ್‍ಸ್ವಾಮಿ ಅವರ ಮಾರ್ಗದರ್ಶನದಲ್ಲಿ “ The Study of Dilution in Weldments Made by (MMAW) Manual Metal ARC Welding for Different Edge Preparation & its Effect on other Characteristics”  ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಪಿಹೆಚ್‍ಡಿ ಪದವಿ ಲಭಿಸಿದೆ.

- Advertisement - 

ಪಿಹೆಚ್‍ಡಿ ಪದವಿ ಪಡೆದ ಜಿ.ಆರ್.ಪ್ರದೀಪ್ ಕುಮಾರ್ ಅವರಿಗೆ ಕುಟುಂಬ ವರ್ಗದವರು, ಸ್ನೇಹಿತರು, ಸಹದ್ಯೋಗಿಗಳು, ಹಿತೈಶಿಗಳು, ಬಂಧು-ಮಿತ್ರರು ಅಭಿನಂದಿಸಿದ್ದಾರೆ.

 

- Advertisement - 

Share This Article
error: Content is protected !!
";