ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಯ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಮಹತ್ವದ ಸಭೆ ನಡೆಸಿ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಚಾಲ್ತಿಯಲ್ಲಿರುವ ಕೈಗಾರಿಕಾ ಯೋಜನೆಗಳು ಮತ್ತು ಅವುಗಳ ಸುಗಮ ಅನುಷ್ಠಾನಕ್ಕೆ ಅಗತ್ಯವಿರುವ ಆಡಳಿತಾತ್ಮಕ ಕ್ರಮಗಳು, ಪ್ರಗತಿಯಲ್ಲಿರುವ ಹೂಡಿಕೆ ಯೋಜನೆಗಳು ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸೂಕ್ತ ನಿರ್ದೇಶನಗಳನ್ನು ನೀಡಿದೆ ಎಂದು ಸಚಿವ ಪಾಟೀಲ್ ತಿಳಿಸಿದರು.

