ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಇದೆ.
ಕೋರ್ ಕಮಿಟಿ ಸದಸ್ಯರ ಮುಂದೆ ಮಂಡ್ಯ ಜಿಲ್ಲೆಯ ನಾಯಕರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಜಿಲ್ಲೆಯ ಇತರ ಪರಾಜಿತ ಅಭ್ಯರ್ಥಿಗಳು ಇದಕ್ಕೆ ದನಿಗೂಡಿಸಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕೆಂದು ಆಗ್ರಹಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಇದ್ದರೂ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಹಿತಾಸಕ್ತಿ ಕಾಪಾಡಲು ಮೈತ್ರಿ ಸಾಧ್ಯವಿಲ್ಲ ಎಂಬುದು ಅವರ ವಾದವಾಗಿದೆ.

