ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಪಕ್ಷದ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನುಷ ಘಟನೆ ನಡೆದಿದ್ದು,
ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಸರ್ಕಾರದಲ್ಲಿ ದಿನ ಬೆಳಗಾದರೆ ವಿಪಕ್ಷ ಶಾಸಕರ ಮೇಲೆ ಕೊಲೆ ಯತ್ನ, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ಇವೆಲ್ಲವೂ ಸರ್ವೇ ಸಾಮಾನ್ಯವಾಗುತ್ತಿದ್ದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಅಶೋಕ್ ಆರೋಪಿಸಿದರು.

