ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರೈತ ಸಂಘ, ನಾಡು ನುಡಿ ಬಳಗ, ಅಂಬೇಡ್ಕರ್ ವಿಚಾರ ವೇದಿಕೆ, ಮೈತ್ರಿ ಪುಸ್ತಕ ಮನೆ ಸಹಯೋಗದೊಂದಿಗೆ ನಾಡೋಜ ಬರಗೂರು ರಾಮಚಂದ್ರಪ್ಪನವರ ಸೌಹಾರ್ದ ಭಾರತ ಕೃತಿಯ ಜನಾರ್ಪಣೆ ಸಮಾರಂಭವನ್ನು ಇದೇ ಜ.10ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪತ್ರಿಕಾಭವನದ ಬಿ.ವಿ.ವೈಕುಂಠರಾಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೃತಿ ಜನಾರ್ಪಣೆ ಮಾಡುವರು. ಕೃತಿಯ ಕುರಿತು ಸಾಹಿತಿ ಡಾ.ಲೋಕೇಶ್ ಅಗಸನಕಟ್ಟೆ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ, ಪ್ರಾಧ್ಯಾಪಕಿ ಡಾ.ತಾರಿಣಿ ಶುಭದಾಯಿನಿ, ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಭಾಗವಹಿಸುವರು. ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ ಪ್ರಾಸ್ತಾವಿಕವಾಗಿ ಮಾತನಾಡುವರು.
ನಾಡೋಜ ಬರಗೂರು ರಾಮಚಂದ್ರಪ್ಪನವರ ಸೌಹಾರ್ದ ಭಾರತ ಕೃತಿಯು ಜ.10ರಂದು ಒಂದೇ ದಿನ 23 ಊರುಗಳಲ್ಲಿ ಜನಾರ್ಪಣೆ. ಇದು ಪುಸ್ತಕ ಜನಾರ್ಪಣೆ ಮಾತ್ರವಲ್ಲ. ಜನಾಕ್ಷರ ಆಂದೋಲನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

