ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮೊಳಗಿವೆ.
ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ.
ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆಶಿ ಎಂದು ಕೂಗಿದರೆ, ಕಾಂಗ್ರೆಸ್ ಹೈಕಮಾಂಡ್ ಮಾತ್ರ ಸದ್ದಿಲ್ಲದೆ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ.
ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ರವಾನಿಸಲಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.
ಡಿಕೆ ಶಿವಕುಮಾರ್ ಕೂಡ ನಾನು ಶಿಸ್ತಿನ ಸಿಪಾಯಿ, ಪಕ್ಷ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿರುವುದು ಈ ಸಂದೇಶಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.
ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗೆ ಹಿಂಜರಿಕೆ ಸ್ಪಷ್ಟವಾಗಿ ಗೋಚರಿಸುತ್ತಿದ್ದು ಕಾರ್ಯಕರ್ತರಲ್ಲಿ ಹುರುಪಿಗೆ ಹೈಕಮಾಂಡ್ ತಣ್ಣೀರು ಹಾಕಿದೆ.

