ಡಿಸಿಸಿ ಬ್ಯಾಂಕ್ ಚುನಾವಣೆಗೆ ಎಂಟ್ರಿ ಕೊಟ್ಟ ವಿಪ ಸದಸ್ಯ ಸಿ.ಟಿ ರವಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದು ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಘಟಾನುಘಟಿ ನಾಯಕರು ಡಿಸಿಸಿ ಬ್ಯಾಂಕ್ ಚುನಾವಣಾ ಕಣಕ್ಕಿಳಿಯುತ್ತಿರುವುದರಿಂದ ಜಿಲ್ಲೆಯಲ್ಲಿ ಸ್ವಲ್ಪ ವಿಶೇಷ ಹಾಗೂ ವಿಭಿನ್ನ ವಾತಾವರಣ ಕಾಣಿಸಲು ಪ್ರಾರಂಭವಾಗಿದೆ.

- Advertisement - 

ಪ್ರಸಕ್ತ ಸಾಲಿನ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿಟಿ ರವಿ ಪ್ರವೇಶ ಮಾಡಿದ್ದು ಈ ಬೆಳವಣಿಗೆಯಿಂದ ಚುನಾವಣಾ ಅಖಾಡ ಇನ್ನಷ್ಟು ರಂಗೇರಿದೆ. ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ – ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದು, ಘಟಾ‌ನುಘಟಿ ನಾಯಕರ ಪ್ರವೇಶದಿಂದ ದಿನದಿಂದ ದಿನಕ್ಕೆ ಲೆಕ್ಕಾಚಾರವೇ ಬದಲಾಗುತ್ತಿದೆ.

ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ಸಿ.ಟಿ ರವಿ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ಮತ್ತೋರ್ವ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಇಬ್ಬರ ನಾಮಪತ್ರ ಸಲ್ಲಿಕೆಯಿಂದ‌ಗಿ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡ ಪ್ರಾಮುಖ್ಯತೆ ಪಡೆದಿದೆ.

- Advertisement - 

ಕಾಂಗ್ರೆಸ್ ಪಕ್ಷದಿಂದ ಈವರೆಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಅಭ್ಯರ್ಥಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಒಟ್ಟು 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನೇರಾ – ನೇರ ಹಣಾಹಣಿ-
ಎನ್​ಡಿಎ ಮೈತ್ರಿಕೂಟದ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ನೇರಾ ನೇರ ಹಣಾಹಣಿ ಸಾಧ್ಯತೆ ಇದ್ದು
, ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕಡೆಯ ದಿನ.
ಇದೇ ತಿಂಗಳ
17 ರಂದು‌ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಲಿದೆ.

 

Share This Article
error: Content is protected !!
";