ಉಪನ್ಯಾಸಕನ ಕಿರುಕುಳ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಆನೇಕಲ್:
ಆನೇಕಲ್‌ನ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಒಬ್ಬಳು ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ನೀಡುತ್ತಿದ್ದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಂತ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಈ ಘಟನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

- Advertisement - 

ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಉಪನ್ಯಾಸಕ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

 ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಪೋಷಕರು ಮತ್ತು ಸಹಪಾಟಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿರುವ ಘಟನೆ ಕೂಡ ಜರುಗಿದೆ.

- Advertisement - 

 

Share This Article
error: Content is protected !!
";