ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್, ತೀವ್ರ ಸಂಕಷ್ಟ ಅನುಭವಿಸಿದ ಪ್ರಯಾಣಿಕರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಆನೇಕಲ್:
ಬೆಂಗಳೂರುಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭಾರೀ ವಾಹನಗಳ ದಟ್ಟಣೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ.

ಬೆಂಗಳೂರು ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ಶುಕ್ರವಾರ ಬೆಳಗ್ಗೆ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು.

- Advertisement - 

ಟ್ರಾಫಿಕ್ ಜಾಮ್ ಮಧ್ಯೆ ಆಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಕಚೇರಿಗಳಿಗೆ, ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ತೀವ್ರ ತೊಂದರೆಗೆ ಒಳಗಾದರು. ಸಮಯಕ್ಕೆ ಶಾಲೆಕಾಲೇಜು ತಲುಪಲು ಸಾಧ್ಯವಾಗದೆ, ಮಕ್ಕಳು ಮತ್ತು ಪೋಷಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

- Advertisement - 

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರುಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದೇ ನಿತ್ಯದ ಟ್ರಾಫಿಕ್ ಜಾಮ್‌ಗೆ ಪ್ರಮುಖ ಕಾರಣ ಎನ್ನಲಾಗಿದೆ. ಚಂದಾಪುರದಿಂದ ಅತ್ತಿಬೆಲೆವರೆಗೆ ಪ್ರತಿದಿನವೂ ಸಂಚಾರ ದುಸ್ಥರವಾಗುತ್ತಿದ್ದು, ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

Share This Article
error: Content is protected !!
";