ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯಲ್ಲಿ ಇತ್ತೀಚೆಗೆ ಬ್ಯಾನರ್ ಕಟ್ಟುವ ವಿಷಯದಲ್ಲಿ ನಡೆದ ಹಿಂಸಾಚಾರದ ಕುರಿತು ಅಧ್ಯಯನ ನಡೆಸಲು ಕೆಪಿಸಿಸಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಶುಕ್ರವಾರ ಸಮಿತಿಯ ಸದಸ್ಯರು ಗಲಭೆಯ ವರದಿಯನ್ನು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸತ್ಯಶೋಧನಾ ಸಮಿತಿ ಸದಸ್ಯರುಗಳಾದ ಹೆಚ್.ಎಂ ರೇವಣ್ಣ, ಟಿ.ರಘುಮೂರ್ತಿ, ಜಯಪ್ರಕಾಶ್ ಹೆಗ್ಗಡೆ ಸೇರಿದಂತೆ ಮತ್ತಿತರರು ಇದ್ದರು.

