ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ ವಿರುದ್ಧ ಧ್ವನಿ ಎತ್ತಲಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ –2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕರ್ನಾಟಕ ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ?

- Advertisement - 

ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, “ಮಾನವೀಯತೆ” ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆ.ಸಿ ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

- Advertisement - 

 

Share This Article
error: Content is protected !!
";