ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ, ನಮ್ಮ ಗ್ರಾಮೀಣ ಭಾಗದ ಜನರ ಆದಾಯದ ಮೂಲವನ್ನು ಖಾತ್ರಿ ಪಡಿಸುವ, ಗ್ರಾಮಾಭಿವೃದ್ಧಿಯ ಸದಾಶಯವನ್ನು ಸಾಕಾರಗೊಳಿಸುವ ಜೊತೆಗೆ ಜನರ ಬದುಕಿಗೆ ಭರವಸೆಯ ಬೆಳಕು ನೀಡುವ ಯೋಜನೆಯಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ನಮ್ಮ ಅನ್ನದಾತ ಕೃಷಿಕರ ಪರಿಶ್ರಮಕ್ಕೆ ಹೆಚ್ಚಿನ ಶಕ್ತಿ ತುಂಬಿ ಆಮೂಲಕ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳಿಸುವ ದಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮೈತ್ರಿ ಪಕ್ಷಗಳ ಪರವಾಗಿ ಮಾಧ್ಯಮಗೋಷ್ಠಿ ನಡೆಸಿ, ವಾಸ್ತವಾಂಶಗಳನ್ನು ಹಂಚಿಕೊಳ್ಳಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾಗಿ ನಾರಾಯಣಸ್ವಾಮಿ, ಪಕ್ಷದ ವಕ್ತಾರ ಅಶ್ವತ್ಥನಾರಾಯಣ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೈತ್ರಿ ಪಕ್ಷಗಳ ಪ್ರಮುಖ ನಾಯಕರು, ಮುಖಂಡರು ಉಪಸ್ಥಿತರಿದ್ದರು.

