ಬಡ್ಡಿ ಕೊಟ್ಟಿಲ್ಲವೆಂದು 17 ವರ್ಷದ ಅಪ್ರಾಪ್ತಿ ಯುವತಿ ಮೇಲೆ ಅತ್ಯಾಚಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಡೆದ ಸಾಲಕ್ಕೆ ಬಡ್ಡಿ ಕೊಟ್ಟಿಲ್ಲ ಎನ್ನುವ ಕಾರಣ ಮುಂದು ಮಾಡಿ ದುಷ್ಕರ್ಮಿಗಳು
17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ಈ ಕುರಿತು ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ಸಾಲ ನೀಡಿದ್ದ ದುಷ್ಕರ್ಮಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿ ಕುಮಾರ್ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದುರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ಥೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ.

ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ ಎನ್ನಲಾಗಿದೆ.
ಇದೇ ವೆಳೆ ಆಗಾಗ ಮನೆ ಬಳಿ ಬಂದು ಬಡ್ಡಿ ಹಣಕ್ಕಾಗಿ ಸಂತ್ರಸ್ತೆ ಹಾಗೂ ಆಕೆಯ ತಂದೆಯನ್ನು ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ​ ಕೊಟ್ಟಿದ್ದ ಎನ್ನಲಾಗಿದೆ.

ಮಾತ್ರವಲ್ಲದೇ ಕಿಸ್​ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನ ಹಳ್ಳಿ ಪೊಲೀಸರು ರವಿಕುಮಾರ್​​ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";