ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಇದೇ ಅ.17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಮದಕರಿ ನಾಯಕ ವೃತ್ತದವರೆಗೂ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ನಗರದ ತ.ರಾ.ಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪಾಲ್ಗೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.