ಅ.20 ಬೃಹತ್ ಉದ್ಯೋಗ ಮೇಳ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ  ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)  ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕರಿಯರ್ ಸರ್ವಿಸ್ (NCS), 

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಇದೇ ಅ.20ರಂದು ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರ, 2ನೇ ಬ್ಲಾಕ್, 28ನೇ ಕ್ರಾಸ್ ರಸ್ತೆ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ರಾಜ್ಯದ ಎಲ್ಲಾ ವಲಯಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದೆ.

ರಾಜ್ಯದ ಯುವ ಜನತೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಉದ್ಯೋಗಾಕಾಂಕ್ಷಿಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರಗಳನ್ನು ಉಚಿತವಾಗಿ ನೊಂದಣಿ ಮಾಡಿಸಿ, ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";