ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ರಾಜ್ಯದಲ್ಲೆಡೆ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಕರೋನ ವೈರಸ್ ನಂತೆ ವ್ಯಾಪಿಸಿದ್ದು, ಬಡ ಜನರ ಜೀವ ಬಲಿ ಪಡೆಯುತ್ತಿದೆಕರ್ನಾಟಕ ಕಾಂಗ್ರೆಸ್ ಸರ್ಕಾರ ಕಣ್ಣಿದ್ದು ಕುರುಡಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತಿರುವ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ. ಮೈಕ್ರೋಫೈನಾನ್ಸ್‌ಗಳ ಕಾಟದಿಂದ ನಮಗೆ ಮುಕ್ತಿ ಕೊಡಿಸಿ ಎಂದು ಅಳಲು ತೋಡಿಕೊಂಡಿದ್ದಾರೆ.
ಬಡ್ಡಿ ಹಾಗೂ ಸಾಲ ವಾಪಸ್ ಗೆ ಇನ್ನಿಲ್ಲದ ಕಿರುಕುಳ, ಹಿಂಸೆ, ನೀಡುತ್ತಿರುವ ಮೈಕ್ರೋ ಫೈನಾನ್ಸ್ ಏಜಂಟರು, ರೌಡಿಗಳ ಅಟ್ಟಹಾಸಕ್ಕೆ ಹೆದರಿ, ಮನನೊಂದು ರಾಮನಗರ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಮೈಕ್ರೋ ಫೈನಾನ್ಸ್ ಕಿರುಕುಳಸಹಿಸುವುದಿಲ್ಲ ಎಂದು ಭರವಸೆ ಕೊಟ್ಟಿದ ಸಿಎಂ ಸಿದ್ದರಾಮಯ್ಯ ಅವರೇ, ಈಗಲಾದರೂ ಜಾಣಕುರುಡು ಬಿಟ್ಟು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಿ, ರಾಜ್ಯದ ಮಹಿಳೆಯರ ಪ್ರಾಣದ ಜೊತೆಗೆ ಅವರ ಮಾಂಗಲ್ಯವನ್ನು ಉಳಿಸಿ. ನಿಮ್ಮ ಬದ್ಧತೆ ತೋರಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.

