ಬಸ್ ಲಾರಿ ಮಧ್ಯ ಹಿರಿಯೂರು ಬಳಿ ಭೀಕರ ಅಪಘಾತ,
ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ 9 ಮಂದಿ ಸಾವು
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪದ ಗೊರ್ಲಡಕು ಬಳಿಯ ಬಳಿ NH-48 ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಎಂದು ಗುರುತಿಸಲಾಗಿದೆ ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿ ಉರಿದಿದೆ.
ಈ ಘಟನೆಯಲ್ಲಿ 9 ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದು, ಅಪಘಾತವು ಬೆಳಗಿನ ಜಾವ 1.45 ಗಂಟೆ ಸುಮಾರಿಗೆ ಸಂಭವಿಸಿದೆ.
ಡಿಸೆಂಬರ್ 25, 2025ರ ಮುಂಜಾನೆ ಸುಮಾರು 3 ಗಂಟೆಗೆ ಚಿತ್ರದುರ್ಗದ ಬಳಿಯ ಗೊರ್ಲಡಕು ಗ್ರಾಮದ ಬಳಿ NH-48ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಎದುರಿನಿಂದ ಬಂದ ಟ್ರಕ್ ಡಿವೈಡರ್ (ಭೀಕರ ಅಪಘಾತ) ಜಿಗಿದು ಬಂದು ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ತಕ್ಷಣ ಬಸ್ ಬೆಂಕಿ ತಗುಲಿ ಹೊತ್ತಿ ಉರಿಯಲಾರಂಭಿಸಿತು, ಇದರಿಂದ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಬೆಂಕಿಯಲ್ಲಿ ಸಿಕ್ಕಿ ಹಾಕಿಕೊಂಡರು.
ಈ ಘಟನೆಯಲ್ಲಿ ಸುಮಾರು 9 ಜನರು ಬೆಂಕಿಯಲ್ಲಿ ಕರಕಲಾಗಿದ್ದು ಸಾವನ್ನಪ್ಪಿರಬಹುದು ಎಂದು ತಿಳಿದಿದ್ದು ಇನ್ನೂ ಕೆಲವರು ಬೆಂಕಿಯಿಂದ ಪಾರಾಗಿದ್ದಾರೆ.
ಅಪಘಾತದ ಮಾಹಿತಿ ದೊರೆತ ತಕ್ಷಣ ಚಿತ್ರದುರ್ಗ ಜಿಲ್ಲೆಯ ಡಿವೈಎಸ್ಪಿ ಶಿವಕುಮಾರ್, ರೂರಲ್ ಇನ್ಸ್ಪೆಕ್ಟರ್ ಆನಂದ್, ಇನ್ಸ್ಪೆಕ್ಟರ್ ಗುಂಡಪ್ಪ, ಹಾಗೂ ಚಿತ್ರದುರ್ಗ ಎಸ್.ಪಿ ರಂಜಿತ್ ಕುಮಾರ್ ಬಂಡಾರು ಅವರು ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಗಳನ್ನು ನಡೆಸಿದ್ದಾರೆ.
ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. 9 ಮಂದಿ ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಾಳುಗಳನ್ನು ಚಿತ್ರದುರ್ಗ, ಹಿರಿಯೂರು, ಶಿರಾಗೆ ಸಮೀಪದ ಆಸ್ಪತ್ರೆಗಳಿಗೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಿಸಲ್ಪಟ್ಟವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

