ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಕತ್ತೆ ತಿಮ್ಮಯ್ಯನಹಟ್ಟಿ ಗ್ರಾಮದ ಗೀತಮ್ಮ (27) ಎಂಬ ಮಹಿಳೆ ಕಾಣೆಯಾದ ಕುರಿತು 2024ರ ಜುಲೈ 07ರಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಗೀತಮ್ಮ ತಂದೆ ಸಿದ್ದಪ್ಪ ಸುಮಾರು 27 ವರ್ಷ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಸುಮಾರು 4.6 ಅಡಿ ಎತ್ತರ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಟಾಪ್ ಧರಿಸಿರುತ್ತಾರೆ.
ಈ ಮೇಲ್ಕಂಡ ಮಹಿಳೆ ಕುರಿತು ಮಾಹಿತಿ ತಿಳಿದುಬಂದಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ.