ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳು ರಾಜ್ಯದ ಜನರಿಗೆ ತಲುಪದಂತೆ ಮಾಡುತ್ತಿದೆ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
70 ವರ್ಷ ದಾಟಿದ ವೃದ್ಧರಿಗೂ ಆಯುಷ್ಮಾನ್‌ಯೋಜನೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ, ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಈ ಯೋಜನೆಯನ್ನು ರಾಜ್ಯದಲ್ಲಿ ಇದುವರೆಗೂ ಅನುಷ್ಠಾನ ಮಾಡಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡದೆ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳನ್ನು ಬಲಿಪಡೆಯುತ್ತಿದೆ. ಇನ್ನೊಂದ ಕಡೆ ವೃದ್ಧರಿಗೆ ಆಯುಷ್ಮಾನ್‌ಯೋಜನೆಯನ್ನು ನೀಡದೆ ಅವರನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಬಲಿ ಪಡೆಯಲು ಹೊಂಚು ಹಾಕಿದಂತಿದೆ ಎಂದು ಬಿಜೆಪಿ ಆರೋಪಿಸಿದೆ.