Ad imageAd image

ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಸದಸ್ಯರ ಕಿರುಕುಳ, ಬೆದರಿಕೆಗಳನ್ನು ಸಹಿಸಲಾಗದೇ ಆತ್ಮಹತ್ಯೆಗೆ ಶರಣಾಗಿರುವ ಅಮಾಯಕ ಗುತ್ತಿಗೆದಾರ ಸಚಿನ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಾಯಿತು. ಅಕ್ಷರಶಃ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಹೇಳಿದರು.

ಅನಾಥ ಪ್ರಜ್ಞೆ ಎದುರಿಸುತ್ತಿರುವ ಮೃತರ ಆಶ್ರಯಿಸಿದ್ದ ಕುಟುಂಬ ಸದಸ್ಯರ ಹಾಗೂ ಬಂಧುಗಳ ಆಕ್ರಂದನದ ಶಾಪ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತಟ್ಟದೇ ಬಿಡದು, ದುಷ್ಕರ್ಮಿಗಳ ಗುಂಪನ್ನು ಪೋಷಿಸುತ್ತಿರುವ ಪ್ರಿಯಾಂಕ್ ಖರ್ಗೆ ಇದರ ಫಲ ಅನುಭವಿಸಲೇಬೇಕು. ಸಚಿನ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಬಿಜೆಪಿ ಹೋರಾಟ ಕೊನೆಯಾಗದು, ನೊಂದ ಸಚಿನ್ ಕುಟುಂಬದೊಂದಿಗೆ ನಾವಿದ್ದೇವೆ ಎಂಬ ಅಭಯ ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಹೇಳೋದು ಸಿದ್ದಾಂತ ಮಾಡೋದು ದುರಾಚಾರಊರಿಗೆಲ್ಲ ಉಪದೇಶ, ಸಿದ್ಧಾಂತ ಹೇಳುತ್ತಾ ತಾವು ಮಾತ್ರ ನೊಂದವರ ಧ್ವನಿಯಾಗಬಲ್ಲೆವು ಎಂಬ ರೀತಿ ತಮ್ಮನ್ನು ಬಿಂಬಿಸಿಕೊಳ್ಳುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ನೈಜ ಮುಖವಾಡ ಈ ಘಟನೆಯಿಂದ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ವಿರೋಧ ಪಕ್ಷದಲ್ಲಿದಾಗ ಇಂಥದ್ದೇ ಪ್ರಕರಣಗಳಲ್ಲಿ ಅಧಿಕಾರದಲ್ಲಿದ್ದವರ ರಾಜೀನಾಮೆಗೆ ಆರ್ಭಟಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದೇ ಸರ್ಕಾರದ ಅವಧಿಯಲ್ಲಿ ನಡೆದಿರುವ ಘಟನೆಯ ಹಿನ್ನಲೆಯಲ್ಲಿ ಈ ಕೂಡಲೇ ದುಷ್ಟರು, ಪುಂಡರು, ಕಮಿಷನ್ ವಸೂಲಿಗಾರರನ್ನು ಜೊತೆಗಿಟ್ಟುಕೊಂಡು ಒಬ್ಬ ಅಮಾಯಕ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣರಾಗಿರುವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆದುಕೊಂಡು ತನಿಖೆಯು ಪಾರದರ್ಶಕವಾಗಿ ನಡೆಯಲು ಅವಕಾಶ ಮಾಡಿಕೊಡಲಿ ಎಂದು ವಿಜಯೇಂದ್ರ ತಾಕೀತು ಮಾಡಿದ್ದಾರೆ.

 

- Advertisement -  - Advertisement - 
Share This Article
error: Content is protected !!
";