ಫೆ.13 ರಂದು ಮಾದಿಗ ಮತ್ತು ಸಂಬಂಧಿತ ಜಾತಿಗಳ ಸಮನ್ವಯ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾದಿಗ ಮತ್ತು ಸಂಬಂಧಿತ ಜಾತಿಗಳ ಸಮನ್ವಯ ಸಭೆಯನ್ನು ಫೆ.13 ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ.

ಸಮಗಾರ, ಚಮ್ಮಾರ್, ಮೋಚಿ, ಡೋರ್, ದಕ್ಕಲಿಗ ಮತ್ತಿತರ ಜಾತಿಗಳು ಮಾದಿಗ ಸಂಬಂಧಿತ ಎಡಗುಂಪಿನ ಜಾತಿಗಳಾಗಿವೆ. ಈ ಜಾತಿಗಳಲ್ಲಿ ಸಾಮರಸ್ಯ ಮೂಡಿಸಿ ಒಗ್ಗಟ್ಟಾಗಿ ನಮ್ಮ ಸಮಸ್ಯೆಗಳ ಪರಿಹಾರ ಹಾಗೂ ಒಳಮೀಸಲಾತಿ ಪಡೆಯುವ ಹಕ್ಕೋತ್ತಾಯವನ್ನು ಮಂಡಿಸಲು ಸಭೆ ಕರೆಯಲಾಗಿದೆ.

ಅಂದಿನ ಸಭೆಗೆ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಅವರು ಖುದ್ದಾಗಿ ಆಗಮಿಸಿ ಎಲ್ಲರ ಸಮಸ್ಯೆಗಳನ್ನು ಆಲಿಸಿ, ಮನವಿ ಸ್ವೀಕರಿಸಲಿದ್ದಾರೆ. ಈ ಸಭೆಗೆ ಮಾದಿಗ ಮತ್ತು ಸಂಬಂಧಿತ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

 

Share This Article
error: Content is protected !!
";