ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹಿಂದ ಒಕ್ಕೂಟದ ಸ್ವಾಮೀಜಿಗಳ ನಿಯೋಗ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದುಳಿದ ದಲಿತ ಮಠಾಧೀಶ್ವರರ ಒಕ್ಕೂಟದ ಸ್ವಾಮೀಜಿಗಳ ನಿಯೋಗದವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಕುರಿತು ಚರ್ಚಿಸಿದರು.

ನಿಯೋಗಕ್ಕೆ ಮುಖ್ಯಮಂತ್ರಿಗಳು ನೀಡಿದ ಭರವಸೆ;
ಸ್ವಾಮೀಜಿಗಳ ನಿಯೋಗದ ಬೇಡಿಕೆಯಂತೆ ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡಲಾಗುವುದು.

ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿದ್ದು, ಜಾಗ ಗುರುತಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿರುವ ಮನವಿಯನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

 

Share This Article
error: Content is protected !!
";