ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಚಿನ್ನದ ಸರ ಊಡುಗೊರೆ ನೀಡಿದ ಅಭಿಮಾನಿ

News Desk

ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಡ್ಯ ಜಿಲ್ಲೆಯ ಜೆಡಿಎಸ್​ ಕಾರ್ಯಕರ್ತರು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.

ಮೈಸೂರಿನ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲು ಹೆಚ್‌.ಡಿ ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ, ಮಾರ್ಗ ಮಧ್ಯದಲ್ಲೇ ಜೆಡಿಎಸ್ ನಾಯಕರು ಅವರನ್ನು ಸ್ವಾಗತಿಸಿ ಶುಭ ಕೋರಿದರು.

- Advertisement - 

ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ ಕಲಾತಂಡಗಳೊಂದಿಗೆ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.

ಬಳಿಕ ಪಕ್ಷದ ಮುಖಂಡರು, ಬೆಂಬಲಿಗರು, ಕಾರ್ಯಕರ್ತರೊಂದಿಗೆ ಹೆಚ್‌.ಡಿ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.

- Advertisement - 

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಮಳವಳ್ಳಿಯಲ್ಲಿ ಮಂಗಳವಾರ ಆಯೋಜಿಸಿರುವ ಸುತ್ತೂರು ಶ್ರೀಗಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ಮಂಡ್ಯದಲ್ಲಿ ಕಾರ್ಯಕರ್ತರು ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು, ನಾನು ಅವರಿಗೆ ಚಿರಋಣಿ ಎಂದು ಭಾವುಕರಾಗಿ ತಿಳಿಸಿದರು.

ನರೇಂದ್ರ ಮೋದಿ ಅವರು ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯದ ಕೆಲಸ ಆಗಬೇಕು. ನನ್ನ ಮೇಲೆ ನಂಬಿಕೆ ಇಟ್ಟಿರುವ ನಾಡಿನ ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಗೃಹಲಕ್ಷ್ಮಿ ಹಣ ವಿತರಣೆ ವಿಳಂಬದ ಕುರಿತು ಮಾತನಾಡಿದ ಕುಮಾರಸ್ವಾಮಿ, ಗೃಹಲಕ್ಷ್ಮಿ ಹಣ ಕೊಡುತ್ತಿದ್ದರೋ ಇಲ್ಲವೋ ತಿಳಿದಿಲ್ಲ. ಆದರೆ, ಕಾಂಗ್ರೆಸ್​ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮುಂದುವರೆದಿದ್ದು, ಅವರ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ಟೀಕಾಪ್ರಹಾರ ಮಾಡಿದರು.

ನಿತ್ಯ ಲೂಟಿ:
32 ಲಕ್ಷ ರೈತ ಕುಟುಂಬಗಳಿಗೆ ಸಹಕಾರಿ ಬ್ಯಾಂಕುಗಳಲ್ಲಿ 22 ಕೋಟಿ ಸಾಲ ಕೊಡುತ್ತೇವೆ ಎಂದವರು ಇನ್ನೂ ಕೊಟ್ಟಿಲ್ಲ. ಹೊಸದಾಗಿ ಸಾಲ ಕೊಟ್ಟಿಲ್ಲ. ರೈತರ ಪರಿಸ್ಥಿತಿ ಏನಾಗಬೇಕು, ನನ್ನ ಚಿಂತನೆ ಇದು. ಚುನಾವಣೆ ಬಂದಾಗ ಒಟ್ಟಿಗೆ ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮೀ ಹಣ ಕೊಡುತ್ತಾರೆ. ಸರ್ಕಾರಕ್ಕೆ ಅಭಿವೃದ್ಧಿ ಅಂದ್ರೆ ಏನು ಅಂತನೇ ಗೊತ್ತಿಲ್ಲ. ಇವರಿಗೆ ನಾಡಿನ ಜನತೆಯ ತೆರಿಗೆ ಹಣ ಮಾತ್ರ ಗೊತ್ತು. ನಿತ್ಯ ಲೂಟಿ ಮಾಡುವುದೇ ಅಭಿವೃದ್ಧಿ ಅಂತ ತಿಳಿದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

ಪ್ರಧಾನ ಮಂತ್ರಿ ಸಾವಿನ ಕುರಿತು ಕಾಂಗ್ರೆಸ್​ ಕಾರ್ಯಕರ್ತರು ಕೂಗಿದ್ದಾರೆ. ಮೊದಲು ಅದರ ಮೇಲೆ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದ ಅವರು ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಕಿಡಿಕಾರಿದರು.

ಬಿಜೆಪಿ ಕಾರ್ಯಕರ್ತನಿಂದ ತಾಯತ ನೀಡಿಕೆ:
ಇದೇ ಸಂದರ್ಭದಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರ ಆಯುಸ್ಸು
, ಆರೋಗ್ಯ, ಯಶಸ್ಸಿಗಾಗಿ ದೇವರ ತಾಯತ ತಂದು ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬವರು ತಾಯಿತ ಉಡುಗೊರೆ ಕೊಟ್ಟು ಅಭಿಮಾನ ಮೆರೆದರು. ಶಿವನಿಗೆ ಪ್ರಿಯವಾದ ರುದ್ರಹೋಮ ಮಾಡಿಸಿ ತಾಯತ ಮಾಡಿಸಿ ಅವರ ಆಯುರಾರೋಗ್ಯ ಮತ್ತು ಯಶಸ್ಸಿಗಾಗಿ ತಾಯತವನ್ನು ಕುಮಾರಸ್ವಾಮಿ ಅವರ ತೋಳಿಗೆ ಕಟ್ಟಿದರು.

 

 

Share This Article
error: Content is protected !!
";