ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು,ಕೊನಘಟ್ಟ ಗ್ರಾಮದಲ್ಲಿ ಗಣೇಶ ಚತುರ್ಥಿ ದಿನದಂದು ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ನೋಡಲೆಂದು ಹೋಗಿದ್ದ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನೆಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿಗಳ ಮಗಳು ಚೇತನ (13) ಮೃತಪಟ್ಟ ಬಾಲಕಿ ಭಾನುವಾರ ಬೆಳಿಗ್ಗೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದಲಾಗಿದ್ದು ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷ ತಿಳಿಸಿದ್ದಾರೆ.
ತಕ್ಷಣ ಬಾಲಕಿ ಚೇತನಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದು ಬಂದಿದೆ
ಚೇತನ ಎಂಬ ಶಾಲಾ ಬಾಲಕಿ ಕೊನಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಪರಿಶೀಲನೆ ನೆಡೆಸಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೋಲೀಸ್ ಮೂಲಗಳಿಂದ ತಿಳಿದು ಬಂದಿದೆ.