ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿವಾಳಿಯಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ , 2024-25ನೇ ಸಾಲಿನ ಅವಧಿ ಮುಕ್ತಾಯಗೊಂಡಿದ್ದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರದ ಹಣ ನೀಡದೆ ಸತಾಯಿಸುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಬಿಡುವಿಲ್ಲದೇ ಕೆಲಸಕ್ಕೆ ಬಳಸಿಕೊಳ್ಳುವ ಸರ್ಕಾರ, ಅವರಿಗೆ ಒಂದು ಜೊತೆ ಸೀರೆ ವಿತರಿಸಲು ಸಾಧ್ಯವಾಗದಿರುವುದು ನಾಚಿಕೆಗೇಡು.
ಫೆಬ್ರವರಿ ತಿಂಗಳಲ್ಲಿ ಅಂಗನವಾಡಿ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಬೇಜಾಬ್ದಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಇನ್ನೂ ಸ್ಪಂದಿಸಿಲ್ಲ, ಅವರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಜೆಡಿಎಸ್ ದೂರಿದೆ.
ಕಳಪೆ ಸೀರೆ ತಿಂಗಳಲ್ಲಿ ಬಣ್ಣ ಮಾಸಿದಂತೆ, ಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ನಿಜಬಣ್ಣವೂ ಬಟ ಬಯಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.