ಹೊರಗುತ್ತಿಗೆ ನೌಕರರಿಗೆ 6 ತಿಂಗಳಿಂದ ಸಂಬಳ ನೀಡದ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್
ಸರ್ಕಾರ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.

ಖಜಾನೆಯಲ್ಲಿ ಹಣವಿಲ್ಲ, ಅಭಿವೃದ್ಧಿಗೆ ಅನುದಾನ ಇಲ್ಲ, ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ, ಗುತ್ತಿಗೆದಾರರಿಗೆ ಬಾಕಿ ಹಣ ಕೊಡುತ್ತಿಲ್ಲ ಇದು ಬುರುಡೆ ಸಿದ್ದರಾಮಯ್ಯನ ಬೊಗಳೆ ಸರ್ಕಾರದ ದಯನೀಯ ಸ್ಥಿತಿ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾವಿರಾರು ಹೊರಗುತ್ತಿಗೆ ನೌಕರರಿಗೆ ಕಳೆದ
6 ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದೆ. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರೇ ನೀವು ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಡೆಯುತ್ತಿದ್ದೀರಿ ಅಲ್ಲವೇ? ಎಂದು ಖಾರವಾಗಿ ಜೆಡಿಎಸ್ ಪ್ರಶ್ನಿಸಿದೆ.

ವೇತನ ಸಿಗದೆ ಡೇಟಾ ಎಂಟ್ರಿ ಆಪರೇಟರ್ಸ್ ಮತ್ತು ಎಂಜಿನಿಯ‌ರ್ಸ್‌ಬದುಕು ಮೂರಾಬಟ್ಟೆಯಾಗಿ ಬೀದಿಗೆ ಬಂದಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

 

- Advertisement -  - Advertisement - 
Share This Article
error: Content is protected !!
";