ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ವಿ.ವಿ. ಪುರ ಗ್ರಾಮದ ಶ್ರೀ ಬಿ.ಎಲ್.ಗೌಡ ಶಾಲೆಯಲ್ಲಿ 1995 ರಿಂದ 1997 ರವರೆಗೆ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಗಿಡ ನೆಟ್ಟು ನೀರು ಹಾಕುವುದರ ಮುಖಾಂತರ ಪ್ರಾರಂಭಿಸಲಾಯಿತು.
ಪ್ರೌಢ ಹಾಗೂ ಪದವಿ ವ್ಯಾಸಂಗ ಮುಗಿಸಿ ಪ್ರಮುಖ ಸರ್ಕಾರಿ ಹಾಗೂ ಖಾಸಗಿ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೃಷಿ ಹಾಗೂ ಸಾಮಾಜಿಕ ಸೇವೆ ಸಲ್ಲಿಸುತ್ತಾ ದಾಂಪತ್ಯ ಜೀವನ ಸಾಗಿಸುತ್ತಿರುವ ನಾವೆಲ್ಲರೂ ಇಪ್ಪತ್ತೇಳು ವರ್ಷಗಳ ನಂತರ ಕೂಡಿ ಗುರುಪೂರ್ಣಿಮೆ ಪ್ರಯುಕ್ತ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಆಚರಿಸುತ್ತಿರುವುದು ಜೀವನದಲ್ಲಿ ಮರೆಯಲಾಗದ ದಿನವಾಯಿತು. ಈ ದಿನದ ನೆನಪಿನ ಕಾಣಿಕೆಯಾಗಿ ಶಾಲೆಗೆ 60000 ಬೆಲೆಯ ಪ್ರಾಜೆಕ್ಟರ್ ನ್ನು ಶಾಲೆಗೆ ನೀಡಲಾಯಿತು ಎಂದು ಹಿರಿಯ ವಿದ್ಯಾರ್ಥಿಗಳು ತಿಳಿಸಿದರು.
ಕಾರ್ಯಕ್ರಮವನ್ನು ಪ್ರಾರ್ಥನೆ ಮುಖಾಂತರ ಪ್ರಾರಂಭಿಸಲಾಯಿತು. ಬಿ.ಆರ್.ರಾಧಾ ನಿರೂಪಣೆ ಮಾಡಿದರು. ಸಿದ್ದಗಂಗಮ್ಮ ಸ್ವಾಗತಿಸಿದರು. ಎಸ್ ವಿ.ಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಿವೃತ್ತ ಮುಖ್ಯೋಪಾಧ್ಯಾಯ ಅನಂತರೆಡ್ಡಿ ಮಾತನಾಡಿ ಈ ಶಾಲೆ ನಡೆದು ಬಂದ ದಾರಿ ವಿವರಿಸಿದರು. ಹಾಗೂ ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸನ್ಮಾನಿತರಾದ ಶಿಕ್ಷಕರೆಲ್ಲರೂ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುವ ಮುಖಾಂತರ ಎಲ್ಲರನ್ನೂ ಆಶೀರ್ವದಿಸಿದರು.
ಹಾಲಿ ಶಿಕ್ಷಕ ಗುರುಮೂರ್ತಿ ಮಾತನಾಡಿ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ನೀಡಿದರು. ಮಂಜುಳಾ ವಂದಿಸಿದರು.
ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಪರೋಕ್ಷವಾಗಿ ಸಹಕರಿಸಿದ ಎಲ್ಲ ಹಿರಿಯ ವಿದ್ಯಾರ್ಥಿಗಳಿಗೂ ಹಾಲಿ ವಿದ್ಯಾರ್ಥಿಗಳಿಗೂ ಶಿಕ್ಷಕ ವೃಂದದವರಿಗೂ ಗ್ರಾಮಸ್ಥರಿಗೂ ಅಭಿನಂದನೆಗಳನ್ನು ಸಲ್ಲಿಸಲಾಯಿತು ಎಂದು ಹಿರಿಯ ವಿದ್ಯಾರ್ಥಿ ಮಂಜುನಾಥ ಕಾತ್ರಿಕೇನಹಳ್ಳಿ ಪತ್ರಿಕೆಗೆ ತಿಳಿಸಿದರು.