ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಶ್ರೀ ಹೊಸಮಠದಲ್ಲಿ ಗುರುವಾರ ಜರುಗಿದ ನಿರಂಜನ ಪಟ್ಟಾಧಿಕಾರ ಮಹೋತ್ಸವ ಹಾಗೂ ನಿ.ಪ್ರ.ಸ್ವ ಶ್ರೀ ಚಿದಾನಂದ ಮಹಾಸ್ವಾಮೀಜಿಗಳವರ ಅಮೃತ ಮಹೋತ್ಸವ ಗುರುವಂದನೆ ಕಾರ್ಯಕ್ರಮದಲ್ಲಿ ಭಕ್ತಿಪೂರ್ವಕವಾಗಿ ಪಾಲ್ಗೊಳ್ಳಲಾಯಿತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಪರಮಪೂಜ್ಯ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಹಾಗೂ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪರಮಪೂಜ್ಯರಾದ ಶ್ರೀ ಗುರುಮಹಾಂತ ಸ್ವಾಮೀಜಿ ಸೇರಿದಂತೆ ಇನ್ನಿತರ ಪರಮಪೂಜ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಈ ಸಮಾರಂಭದಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಶ್ರೀವತ್ಸ, ಮಾಜಿ ಸಂಸದ ಪ್ರತಾಪ್‌ಸಿಂಹ ಹಾಗೂ ಗಣ್ಯರು, ಪರಮಪೂಜ್ಯರು ಉಪಸ್ಥಿತರಿದ್ದರು.

