ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಹಿರಿಯೂರು ನಗರಕ್ಕೆ ಭೇಟಿ ನೀಡಿದ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ ಹೆಮ್ಮೆಯ ಜನನಾಯಕ ಎಂದು ಬಣ್ಣಿಸಿದ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯೂರಿನಲ್ಲಿ ಅದ್ಧೂರಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭಕೋರಿದ ಪ್ರಮುಖರಾದ ಕೆಪಿಸಿಸಿ ಸದಸ್ಯ ಅಮ್ಮತೇಶ್ವರ ಸ್ವಾಮಿ, ಮುನ್ನ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೆ ಗೌಡ, ಕೃಷಿಕ ಸಮಾಜದ ಅಧ್ಯಕ್ಷ ಚಿಗಳಿಕಟ್ಟೆ ಕಾಂತರಾಜ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಈ. ಮಂಜುನಾಥ್, ಪಾತಲಿಂಗಪ್ಪ, ಚಂದ್ರಶೇಖರ್, ಮಮತ, ಶಿವರಂಜಿನಿ, ಬಾಲಕೃಷ್ಣ ಆಚಾರ್ಯ ಹಾಗೂ ಪಕ್ಷದ ವಿವಿಧ ಸ್ತರದ ನಾಯಕರು ಭಾಗವಹಿಸಿದ್ದರು.

ಒಗ್ಗಟ್ಟಿನ ಪ್ರದರ್ಶನ:
ನಗರಸಭೆಯ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರ ಭೇಟಿಯು ಸ್ಥಳೀಯ ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.

