ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರುನಾಡಿನ ಅಭಿವೃದ್ಧಿಗೆ ಕೈ ಹಿಡಿದ ಗ್ಯಾರಂಟಿ ಯೋಜನೆಗಳು ಎಂದು ಕಾಂಗ್ರೆಸ್ ತಿಳಿಸಿದೆ.
ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023 ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ 2,000 ದಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನ ಸಹಾಯ ಮಾಡಲಾಗಿದೆ.
ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಆರ್ಥಿಕ ಬಲವರ್ಧನೆಗಾಗಿ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಅಕ್ಕ ಕೆಫೆಗಳು ಆರಂಭ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 22.32 ಲಕ್ಷ ಮಹಿಳೆಯರಿಗೆ ಉದ್ಯೋಗಾವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿಳಿಸಿದೆ.