ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಲೆಗಡುಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯಕ್ಕೆ ನೂರಾರು ಹೆಣಗಳು ಬೀಳುತ್ತಲೇ ಇವೆ ಎಂದು ಬಿಜೆಪಿ ಟೀಕಿಸಿದೆ.
ಒಂದು ಕಡೆ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಮರಣ ಹೊಂದುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ಆಸ್ಪತ್ರೆಗಳಿಗೆ ಸಿಬ್ಬಂದಿಗಳನ್ನ ನೇಮಕ ಮಾಡದೆ ಮರಣ ಶಾಸನ ಬರೆಯುತ್ತಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಯೋಗ್ಯರಾಗಿರುವುದಕ್ಕೆ ಇಷ್ಟೆಲ್ಲ ಸಮಸ್ಯೆಗಳಿಗೆ ಕಾರಣ ಎಂದು ಬಿಜೆಪಿ ದೂರಿದೆ.