ವಿಮಾನ ಅಪಘಾತ ಶಾಪಿಂಗ್ ಮಾಲ್ ಬಳಿ ಭಾರೀ ಬೆಂಕಿ

News Desk

ಚಂದ್ರವಳ್ಳಿ ನ್ಯೂಸ್, ಫಿಲಡೆಲ್ಫಿಯಾ:
ಅಮೆರಿಕದ ಫಿಲಡೆಲ್ಫಿಯಾದಲ್ಲಿ ಸಣ್ಣ ವಿಮಾನವೊಂದು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಶಾಪಿಂಗ್ ಮಾಲ್ ಬಳಿ ವಿಮಾನ ಪತನಗೊಂಡಿದ್ದು
, ಭಾರೀ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ಪ್ರದೇಶದಲ್ಲಿ ಮನೆಗಳು ಮತ್ತು ಕಾರುಗಳು ಸುಟ್ಟು ಭಸ್ಮವಾಗಿವೆ.

ವಿಮಾನ ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದ ಜೊತೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಈ ಘಟನೆಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎನ್ನುವ ವರದಿಗಳು ಬರುತ್ತಿವೆ.

ಪೆನ್ಸಿಲ್ವೇನಿಯಾದ ಗವರ್ನರ್ ಜೋಶ್ ಶಾಪಿರೋ ವಿಮಾನ ಅಪಘಾತದ ಕುರಿತು ದೃಢಪಡಿಸಿದ್ದು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಿಂದ 6:06 p.m.ಕ್ಕೆ ಸಣ್ಣ ಜೆಟ್ ಟೇಕ್ ಆಫ್ ಆಗಿದೆ. ಅಲ್ಲಿಂದ 1,600 ಅಡಿ (487 ಮೀಟರ್) ಎತ್ತರಕ್ಕೆ ಏರಿದ ಬಳಿಕ ಸುಮಾರು 30 ಸೆಕೆಂಡುಗಳ ನಂತರ ರಾಡಾರ್‌ನಿಂದ ವಿಮಾನ ಕಣ್ಮರೆಯಾಗಿದೆ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";