ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ನಡೆಯಿತು.
ಸಚಿವರಾದ ಪ್ರಿಯಾಂಕ್ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.