ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿದ್ಯಾರಣ್ಯಪುರದ ಎಂ.ಎಸ್ ಪಾಳ್ಯದಲ್ಲಿರುವ ಶ್ರೀ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಸ್ಥಳೀಯರು ಒಬ್ಬರು ಅಕ್ರಮವಾಗಿ ಶಾಲೆಯನ್ನು ಕಬ್ಜ ಮಾಡಿಕೊಂಡು ತಮ್ಮನ್ನು ಶಾಲೆ ಆವರಣದಿಂದ ಹೊರಗೆ ಹಾಕಿದ್ದಾರೆಂದು ಗ್ರಾಮಸ್ಥರು ದೂರಿದರು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.
ಕೂಡಲೇ ಕಾರ್ಯ ಪ್ರವೃತ್ತರಾದ ಡಿಸಿಎಂ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಡಿಡಿಪಿಐಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದೇನೆ. ಅವಶ್ಯಕತೆ ಇದ್ದರೆ ನಾನೇ ಭೇಟಿ ನೀಡಿ ಸಮಸ್ಯೆ ಪರಿಹರಿಸಿಕೊಡುತ್ತೇನೆ ಎಂಬ ಭರವಸೆ ಡಿಸಿಎಂ ನೀಡಿದ್ದಾರೆ.
ಎಲ್ಲರೂ ಕಾನೂನಿಗೆ ಗೌರವ ನೀಡಬೇಕು; ಅದು ಯಾರೇ ಆಗಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಾಕೀತು ಮಾಡಿದ್ದಾರೆ.