ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದಿನಿಂದ ವಕ್ಫ್‌ಬೋರ್ಡ್‌ಹಾಗೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ಜನಾಂದೋಲನ ಆರಂಭಿಸಿದೆ ಎಂದು ಬಿಜೆಪಿ ತಿಳಿಸಿದೆ.
ಬಿಜೆಪಿ ರಾಜ್ಯಾಧ್ಯಕರಾದ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಪರಿಷತ್ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮೂರು ತಂಡಗಳಾಗಿ ರೈತರ ಅಹವಾಲು ಸ್ವೀಕರಿಸುತ್ತಾ ಪಾದಯಾತ್ರೆ ಮಾಡುತ್ತಾ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ತಿಳಿಸಿದೆ.
ನಾಡಿನ ಜನತೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟಕ್ಕೆ ಕೈ ಜೋಡಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ ಎಂದು ಬಿಜೆಪಿ ಮನವಿ ಮಾಡಿದೆ.

