ದೇಶದ ಚಿಂತನೆಗೆ ಪೂರಕವಾಗಿ ಬದುಕುತ್ತಿರುವ ಮಾದರಿ ಹವ್ಯಕ ಸಮಾಜ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಚಿಂತನೆಗೆ ಪೂರಕವಾಗಿ ಬದುಕುತ್ತಿರುವ ಮಾದರಿ ಸಮಾಜವೇ ಹವ್ಯಕ ಸಮುದಾಯ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಸ್ವಾಭಿಮಾನಿ ಹಾಗೂ ಸೌಹಾರ್ದಯುತ ಮಾದರಿ ಬದುಕಿಗೆ ಹೆಸರಾಗಿರುವ ಹವ್ಯಕ ಸಮುದಾಯ ವಿಶ್ವಮಟ್ಟದ ಸಮ್ಮೇಳನದ ಮೂಲಕ ಸಮುದಾಯದ ವಿಶಿಷ್ಟತೆಯನ್ನು ಜಗತ್ತು ನೋಡುವಂತಾಗಿದ್ದು ಸಮುದಾಯವನ್ನು ಸಂಘಟಿತ ಮಾರ್ಗದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಯಾಗಲೆಂದು ಹಾರೈಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಮಂತ್ರಾಲಯದ ಪರಮಪೂಜ್ಯ ಸುಬುಧೇಂದ್ರ ತೀರ್ಥ ಶ್ರೀಗಳು, ಪರಮಪೂಜ್ಯ ಯತಿರಾಜ ಜೀ ಶ್ರೀಗಳು ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್, ವಕೀಲರಾದ ಅಶೋಕ್ ಹಾರನಹಳ್ಳಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ, ವೈದ್ಯರಾದ ಗಿರಿಧರ್ ಕಜೆ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.

 

 

- Advertisement -  - Advertisement - 
Share This Article
error: Content is protected !!
";