ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

News Desk

ಚಂದ್ರವಳ್ಳಿ ನ್ಯೂಸ್, ಕೋಲಾರ:
ಇಬ್ಬರು ಮಕ್ಕಳನ್ನು ಕೊಂದು ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದಲ್ಲಿ ಜರುಗಿದೆ‌.

ಗ್ರಾಮದ ತಿಪ್ಪಮ್ಮ (30) ಎನ್ನುವರು ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಮೆಲ್ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪತಿ ಮಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌.

ಕಳೆದ ಎಂಟು ವರ್ಷಗಳ ಹಿಂದೆ ಇವರ ಮದುವೆಯಾಗಿತ್ತು. ದಂಪತಿಗೆ 7 ವರ್ಷದ ಮೌನಿಶ್​ ಹಾಗೂ 4 ವರ್ಷದ ನಿತಿನ್ ಎಂಬಿಬ್ಬರು ಮಕ್ಕಳಿದ್ದರು‌. ಆಗಾಗ ಗಂಡ-ಹೆಂಡತಿ ನಡುವೆ ಗಲಾಟೆಯಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದರಿಂದಾಗಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";