ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಡುಪಿಯಲ್ಲಿ ಮುಸ್ಲಿಂ ಯುವಕ ಕ್ರೈಸ್ತ ಯುವತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅಪಹರಿಸಿಕೊಂಡು ಹೋಗಿದ್ದಾನೆ. ಪೋಷಕರು ಮಗಳನ್ನು ಹುಡುಕಿ ಕೊಡಿ ಎಂದು ಠಾಣೆಗೆ ದೂರು ನೀಡಿದರೂ ಪೊಲೀಸರು ಸ್ಪಂದಿಸದೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಮೀಸಲಾತಿ ನೀಡುವುದರ ಜೊತೆಗೆ ಯುವತಿಯರನ್ನು ಲವ್ ಜಿಹಾದ್ ಮೂಲಕ ಕಳುಹಿಸಿ ಕೊಡುತ್ತಿದೆ.
ಡಿಕೆ ಶಿವಕುಮಾರ್ ಅವರೇ, ಮುಸ್ಲಿಮರನ್ನು ಮುಟ್ಟಬೇಡಿ ಎಂದು ಪೊಲೀಸರಿಗೆ ಸರ್ಕಾರದಿಂದ ಫತ್ವಾ ಏನಾದರೂ ಹೊರಡಿಸಿದ್ದೀರಾ? ಎಂದು ಬಿಜೆಪಿ ಪ್ರಶ್ನಿಸಿದೆ.