ಹೊತ್ತಿ ಉರಿದ ಖಾಸಗಿ ಬಸ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖಾಸಗಿ ಬಸ್​ವೊಂದು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಗರದ ಚಂದ್ರಾ ಲೇಔಟ್​ನ ಬಿಎಂಟಿಸಿ ಡಿಪೋ ಬಳಿ ಜರುಗಿದೆ.

ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎನ್ನಲಾಗಿದೆ.
ಬಸ್ಸಿಗೆ ತಗುಲಿದ್ದ ಬೆಂಕಿಯ ಜ್ವಾಲೆಗೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಬ್ಬಿ
ಅವಕ್ಕೂ ಹಾನಿಯಾಗಿವೆ.

- Advertisement - 

 ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬಸ್ ಹೊತ್ತಿ ಉರಿಯಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್
, ಡೀಸೆಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

- Advertisement - 

 

Share This Article
error: Content is protected !!
";