ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ ಐಫಾ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಈ ಉತ್ಸವ ಆಯೋಜನೆಯಿಂದ ಕರ್ನಾಟಕವು ಮನರಂಜನಾ ಕ್ಷೇತ್ರದಲ್ಲಿ ಜಾಗತಿಕವಾಗಿ ಇನ್ನಷ್ಟು ಪ್ರಚಾರಗೊಳ್ಳುವುದರ ಜೊತೆಗೆ, ಮತ್ತಷ್ಟು ಆರ್ಥಿಕ ಬೆಳವಣಿಗೆಗೆ ತೆರೆದುಕೊಳ್ಳಲಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.