ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಮನೆಹಾಳ ಕರ್ನಾಟಕ ಕಾಂಗ್ರೆಸ್ ಸರ್ಕಾರ” ಈಗ ಬೆಂಗಳೂರು ಉತ್ತರ ತಾಲೂಕಿನ ದಾಸನಪುರದ ಜನರನ್ನು ಒಕ್ಕಲೆಬ್ಬಿಸುವ ದುಷ್ಟ ಪ್ರಯತ್ನಕ್ಕೆ ಮುಂದಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಫೆರಿಫೆರಲ್ ರಿಂಗ್‌ರಸ್ತೆ, ಬಿಎಂಟಿಸಿ ಬಸ್ ಡಿಪೋ ಹಾಗೂ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಭೂ ಸ್ವಾಧೀನಪಡಿಸಿಕೊಳ್ಳಲು ಸಾವಿರಾರು ಭೂಮಾಲೀಕರಿಗೆ ಬಿಡಿಎ ನೋಟಿಸ್ ನೀಡಿದೆ.
ದಾಸನಪುರದ 15 ಕ್ಕೂ ಹೆಚ್ಚು ಗ್ರಾಮಸ್ಥರ 20 ವರ್ಷಗಳ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ಥಳೀಯರು ಕಣ್ಣೀರಿಟ್ಟು ಹಿಡಿಶಾಪ ಹಾಕುತ್ತಿದ್ದಾರೆ.
ಬೆವರು ಸುರಿಸಿ ಕಷ್ಟ ಪಟ್ಟು ದುಡಿದು, ಸಾಲ ಮಾಡಿ ಸ್ವಂತ ಮನೆ ಕಟ್ಟಿಕೊಂಡು ಜೀವನ ಸಾಗಿಸುತ್ತಿರುವ ಸಾವಿರಾರು ಜನರನ್ನು ಏಕಾಏಕಿ ನೋಟಿಸ್‌ನೀಡಿ ಒಕ್ಕಲೆಬ್ಬಿಸುತ್ತಿರುವ ಸರ್ಕಾರದ ನಿರ್ಧಾರ ಖಂಡನೀಯ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
“ಬ್ರ್ಯಾಂಡ್‌ಬೆಂಗಳೂರು” ಹೆಸರಲ್ಲಿ ರಿಯಲ್‌ಎಸ್ಟೇಟ್‌ದಂಧೆ ನಡೆಸುತ್ತಿರುವ ಸಚಿವರ ಸಂಪತ್ತಿನ ಆಸೆಗೆ ಅದೆಷ್ಟು ಸಾವಿರ ಕುಟುಂಬಗಳನ್ನು ಬೀದಿ ಪಾಲು ಮಾಡುತ್ತಾರೋ ಆ ಶಿವನೇ ಬಲ್ಲ ! ಎಂದು ಜೆಡಿಎಸ್ ವ್ಯಂಗ್ಯವಾಡಿದೆ.