ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಅಧ್ಯಕ್ಷತೆಯಲ್ಲಿ ಮೇ.20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚರ್ಚಿಸಲಾಯಿತು.
ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಹೊಸಪೇಟೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸಮರ್ಪಕವಾಗಿ ಕರೆದುಕೊಂಡು ಹೋಗಿ ಬರುವಂತೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ ಸೇರಿದಂತೆ ತಹಶೀಲ್ದಾರ್ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.