ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೋರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗವಹಿಸಿದ್ದರು.
9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ರಾಜ್ಯ ಸರ್ಕಾರದ ಅವಿವೇಕಿ ನಿರ್ಧಾರಗಳನ್ನು ಖಂಡಿಸಿ ಹಾಗೂ ವಿವಿ ಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆ ಖಂಡಿಸಿ ಬೃಹತ್ ಆಂದೋಲನ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಗಂಭೀರ ಚರ್ಚೆಗಳು ನಡೆದವು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಸಚಿವರಾದ ಸಿ.ಟಿ ರವಿ, ಅರವಿಂದ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಡಿ.ಎಸ್.ಅರುಣ್, ಹೇಮಲತಾ ನಾಯಕ್,
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಕುಮಾರ್ ಶಾಪುರ್, ವಿಶ್ರಾಂತ ಕುಲಪತಿಗಳು, ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಹಾಗೂ ಕೌನ್ಸಿಲ್ ಸದಸ್ಯರುಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪ್ರಮುಖರು ಸೇರಿದಂತೆ, ಶಿಕ್ಷಣ ತಜ್ಞರು, ಶೈಕ್ಷಣಿಕ ರಂಗದ ಪರಿಣಿತರು ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.